ಮಧೂರು: ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಗಾಗಿ ಭತ್ತ ನಾಟಿಗೆ ಚಾಲನೆ

ಇತಿಹಾಸ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಯನ್ನು ಸಾವಯವ ಕೃಷಿಯ ಮೂಲಕ ತಯಾರಿಸಲು ಭತ್ತದ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ವೇಣುಗೋಪಾಲ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಂತರ ಏರಿಕ್ಕಳ ಬಯಲಿನಲ್ಲಿ ಶ್ರೀ ಸ್ವಾಮೀಜಿಯವರ ದಿವ್ಯ ಹಸ್ತದಿಂದ ನೇಜಿ ನಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಈ ಕಾರ್ಯಕ್ರಮದಲ್ಲಿ ನವೀಕರಣ ಸಮಿತಿಯ, ಬ್ರಹ್ಮಕಲಶೋತ್ಸವ ಸಮಿತಿಯ ಹಾಗೂ ಊರ ಹತ್ತು ಸಮಸ್ತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.