ಮಡಿಕೇರಿ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ: ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಶಿಕ್ಷಣ ತಜ್ಞರಾದ ಪ್ರೊ. ಕೆ.ಇ. ರಾಧಾಕೃಷ್ಣ ಅವರು ಮಾತನಾಡಿ, ಒಂದು ಸಣ್ಣ ಅಕಾಡೆಮಿಯ ಮೂಲಕ ಕಾವೇರಿ ಮತ್ತು ಪಯಸ್ವಿನಿಯ ತಪ್ಪಲಿನಲ್ಲಿರುವ ಸಮುದಾಯದ ಭಾಷೆಯನ್ನು ಸತ್ವಪೂರ್ಣವಾಗಿ ಮಾಡುವುದಕ್ಕೆ ಅರೆಭಾಷೆ ಅಕಾಡೆಮಿ ಕಾರಣವಾಯಿತು ಎಂದರು.
2022ನೇ ಗೌರವ ಪ್ರಶಸ್ತಿಯನ್ನು ಸಂಶೋಧನೆ ಮತ್ತು ಅರೆಭಾಷೆ ಸಾಹಿತ್ಯದಲ್ಲಿ ಡಾ. ಕಾವೇರಿಮನೆ ಬೋಜಪ್ಪ, ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಕೆ.ವಿ. ಚಿದಾನಂದ, ಅರೆಭಾಷೆ ಮತ್ತು ಸಂಸ್ಕೃತಿ ಸೇವೆಯಲ್ಲಿ ತುಂತಜೆ ವೆಂಕಟೇಶ್ ಹಾಗೂ 2023ನೇ ಗೌರವ ಪ್ರಶಸ್ತಿಯನ್ನು ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಯಲ್ಲಿ ಕುಯಿಂತೋಡು ದಾಮೋದರ, ಅರೆಭಾಷೆ ಅಧ್ಯಯನ ಮತ್ತು ಸಂಶೋಧನೆಗೆ ಎ.ಕೆ. ಹಿಮಕರ, ಅರೆಭಾಷೆ ಸಾಧಕಿ ಮತ್ತು ಕಲಾ ಪೋಷಕರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ ಅವರಿಗೆ ಪ್ರದಾನಿಸಲಾಯಿತು.

ಇದೇ ವೇಳೆ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಡಾ. ಮಂತರ್ ಗೌಡ, ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ತೇನನ ರಾಜೇಶ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ರಿಜಿಸ್ಟ್ರಾರ್ ಚಿನ್ನಸ್ವಾಮಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್, ಮತ್ತು ಅರೆಭಾಷೆ ಅಕಾಡೆಮಿಯ ಸದಸ್ಯರು ಉಪಸ್ಥಿತರಿದ್ದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಚಂದ್ರಶೇಖರ ಪೇರಾಲು ಅವರು ಪ್ರಸ್ತಾವಿಕವಾಗಿ ಮಾತನಾಡಿ, ಗಣ್ಯರನ್ನು ಸ್ವಾಗತಿಸಿದರು.
