ಮಹಾರಾಷ್ಟ್ರ: ಟ್ರಕ್ ಹಾಗೂ ಬಸ್ ಅಪಘಾತ: ಬೆಂಕಿ ಹೊತ್ತಿ 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ.
