HomeFresh Newsಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು.

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments