HomeFresh Newsಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಹೇಶ್ವರಿ, ಕಾಯ೯ದಶಿ೯ಯಾಗಿ ಅರ್ಚನಾ ಜೈನ್ ಅವಿರೋಧವಾಗಿ ಆಯ್ಕೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಹೇಶ್ವರಿ, ಕಾಯ೯ದಶಿ೯ಯಾಗಿ ಅರ್ಚನಾ ಜೈನ್ ಅವಿರೋಧವಾಗಿ ಆಯ್ಕೆ

ಮೂಡುಬಿದಿರೆ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಮೊಟ್ಟಮೊದಲ ಮಹಿಳಾ ಅಧ್ಯಕ್ಷರಾಗಿ ಮಹೇಶ್ವರಿ, ಕಾಯ೯ದಶಿ೯ಯಾಗಿ ಅಚ೯ನಾ ಜೈನ್ ಆಯ್ಕೆಯಾಗಿದ್ದಾರೆ.ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್ವರಿ ಅವರು ಕಳೆದ 20 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಪ್ರಸ್ತುತ ಸರಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ಮೈನ್ ಇಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು 2015 – 2020 ರ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಸಂಘಟನೆಯಲ್ಲಿ ಜಿಲ್ಲಾ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಿದ್ದರು.


ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾಯ೯ದಶಿ೯ಯಾಗಿ ಆಯ್ಕೆಯಾಗಿರುವ ಅಚ೯ನಾ ಜೈನ್ ಅವರು ಮಾಂಟ್ರಾಡಿ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಚುನಾವಣಾ ಅಧಿಕಾರಿಯಾಗಿರುವ ಪ್ರಫುಲ್ಲ ಶೆಟ್ಟಿ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments