HomeFresh Newsಉಡುಪಿ: ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಎಂಟು ಮಂದಿಯ ರಕ್ಷಣೆ

ಉಡುಪಿ: ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಎಂಟು ಮಂದಿಯ ರಕ್ಷಣೆ

ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಮಲ್ಪೆಯಿಂದ ನೇರ 26 ಮಾರು ಆಳ ದೂರದಲ್ಲಿ ಮುಳುಗಡೆಗೊಂಡಿದೆ. ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿಸಲಾಗಿದೆ.

ಕಡೆಕಾರು ರಕ್ಷಾ ಅವರಿಗೆ ಸೇರಿದ ಬೋಟು ಡಿ. 12ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಡಿ. 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್‌ಕ್ಷಣ ಬೋಟಿನವರು ವಯರ್‌ಲೆಸ್ ಮೂಲಕ ಇತರ ಬೋಟ್‌ಗಳಿಗೆ ಸಂದೇಶ ನೀಡಿದರು. ಶ್ರೀ ಮೂಕಾಂಬಿಕಾ ಅನುಗ್ರಹ ಬೋಟಿನವನರು ಧಾವಿಸಿ ಬಂದು ಮುಳುಗುತ್ತಿರುವ ಬೋಟನ್ನು ಮೇಲೆಳೆಯಲು ಯತ್ನಿಸಿದರು. ನೀರಿನ ಅಬ್ಬರ ಜಾಸ್ತಿಯಾಗಿದ್ದರಿಂದ ಪ್ರಯತ್ನ ಫಲ ನೀಡಲಿಲ್ಲ. ಸುಮಾರು 8 ಗಂಟೆ ವೇಳೆಗೆ ಬೋಟ್ ಪೂರ್ಣ ಮುಳುಗಡೆಗೊಂಡಿತು. ಅದರಲ್ಲಿದ್ದ ಮೀನುಗಾರರನ್ನು ಮೂಕಾಂಬಿಕಾ ಬೋಟಿನವರು ದಡಕ್ಕೆ ಸೇರಿಸಿದ್ದಾರೆ. ಸುಮಾರು 18 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments