HomeFresh Newsಮಲ್ಪೆ ಬೀಚ್ ಬಳಿ ಉದ್ಘಾಟನೆಗೊಂಡ ರುದ್ರಭೂಮಿ : ಮಾಜಿ ಶಾಸಕ ಕೆ. ರಘುಪತಿ ಭಟ್ ಭಾಗಿ

ಮಲ್ಪೆ ಬೀಚ್ ಬಳಿ ಉದ್ಘಾಟನೆಗೊಂಡ ರುದ್ರಭೂಮಿ : ಮಾಜಿ ಶಾಸಕ ಕೆ. ರಘುಪತಿ ಭಟ್ ಭಾಗಿ

ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ಬಳಿಯಿರುವ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು ಮೇ 29, 2023 ರ ಸೋಮವಾರದಂದು ರುದ್ರಭೂಮಿಯ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಮತ್ತು ಮಾಜಿ ಶಾಸಕರಾದ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು. ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಅವಧಿಯಲ್ಲಿ ಅವರ ಶಿಫಾರಸ್ಸಿನ ಮೇರೆಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 10 ಲಕ್ಷ ರೂಪಾಯಿ ಅನುದಾನ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ಕೆ ಮಂಜೂರಾಗಿತ್ತು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಸಭೆಯ ಮಾಜಿ ಸದಸ್ಯರಾದ ಪಾಂಡುರಂಗ ಮಲ್ಪೆ, ವಿಜಯ್ ಕುಂದರ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments