HomeFresh Newsಮಲ್ಪೆ ಠಾಣೆಯ ಎಎಸ್‌ಐ ಹೃದಯಾಘಾತದಿಂದ ನಿಧನ

ಮಲ್ಪೆ ಠಾಣೆಯ ಎಎಸ್‌ಐ ಹೃದಯಾಘಾತದಿಂದ ನಿಧನ

ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಅವರು ಮೃತಪಟ್ಟಿದ್ದಾರೆ.

ವಿಶ್ವನಾಥ್ ಇತ್ತೀಚೆಗಷ್ಟೇ ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ್‌ ಅವರು ಜನಸಾಮಾನ್ಯರಿಗೆ ಹತ್ತಿರವಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments