ಮಲ್ಪೆ: ಪ್ರಚೋದನಕಾರಿ ಭಾಷಣ:ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷನ ವಿರುದ್ಧ ಸುಮೊಟೋ ಪ್ರಕರಣ

ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ಬಂಧನ ವಿರೋಧಿಸಿ ಮಾ 22ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷ ಮಂಜುಕೊಳ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿದೆ.
ದಯಮಾಡಿ ಬಂಧಿತ ನಾಲ್ಕು ಮಹಿಳೆಯರನ್ನು ಬಿಡಬೇಕು ಎಂದ ವೇದಿಕೆ ಮಂಜು ಕೊಳ ಭಾಷಣ ಮಾಡುವ ನೆಪದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗಟ್ಟುವ ಮಾತನಾಡುತ್ತಾ ಸಾರ್ವಜನಿಕರಿಂದ ಇಂತಹ ಅಪರಾಧ ಮಾಡಿಸಲು ದುಷ್ಟೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ, ಉದ್ದೇಶ ಪೂರ್ವಕವಾಗಿ ಭಾಷಣ ಮಾಡಿ ದೊಂಬಿಯ ಅಪರಾಧವು ನಡೆಯುವ ಸಂಭವ ಇದೆ ಎಂದು ಗೊತ್ತಿದ್ದೂ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿರುತ್ತಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 38/2025 ಕಲಂ. ಕಲಂ 57, 191(1), 192. BNS ರಂತೆ ಸುಮೊಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿರುತ್ತದೆ.