ಕಾರ್ಕಳ ವಿಧಾನ ಸಭಾ ಕ್ಷೇತ್ರ : ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಮಮತಾ ಹೆಗ್ಡೆ ದಿಲ್ಲಿ ಭೇಟಿ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಹಲವು ತಿಂಗಳಿಂದ ಕ್ಷೇತ್ರದಾದ್ಯಂತ ಮತದಾರರನ್ನು ಭೇಟಿಯಾಗಿ ಸ್ಥಳೀಯ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ.
