ಕುಸಿದುಬಿದ್ದು ವ್ಯಕ್ತಿಯೋರ್ವನಿಗೆ ಗಂಭೀರ ಗಾಯ

ಉಡುಪಿ : ಕುಸಿದುಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಡಿಸೋಜ ಕಡೇಕಾರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದ ದಾತ್ರಿ ಮೆಡಿಕಲ್ ಸಿಬ್ಬಂದಿಯೋರ್ವರು ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡುದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ನಿತ್ಯಾನಂದ ಒಳಕಾಡು ಅವರು, ವ್ಯಕ್ತಿಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಸಂಬಂಧಿಕರು ಕೂಡಲೇ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.