ಉಡುಪಿ : ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ತೋಡಿನಿಂದ ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀಡಿನಗುಡ್ಡೆಯಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು
RELATED ARTICLES
