ಶ್ರೀ ಮಂಗಳಾದೇವಿ ದೇವಸ್ಥಾನ : ದಸರಾ ಕವಿ ಸಂಭ್ರಮ ಸಾಧಕರಿಗೆ ಸನ್ಮಾನ

ದಸರಾ ಸಂಭ್ರಮಾಚರಣೆಯ ಅಂಗವಾಗಿ ಆಸಕ್ತಿ ಮಂಗಳೂರು, ಕಲಾಸಕ್ತರ ಬಳಗ ಹಾಗೂ ಚುಟುಕು ಸಾಹಿತ್ಯ ಪರಿಷತ್ ಅವರು ಆಯೋಜನೆ ಮಾಡಿದಂತಹ ಕವಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಕಲಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮಾನಾಥ ಹೆಗ್ಡೆ ಉದ್ಘಾಟಿಸಿದರು. ಚುಟುಕು ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ರಂಗಭೂಮಿ ಹಾಗೂ ಚಲನಚಿತ್ರ ನಟ ಮೋಹನ್ ಕೆ ಬೋಳಾರ್ ಮತ್ತು ಖ್ಯಾತ ಹಿರಿಯ ಹುಲಿ ವೇಷಧಾರಿ ಮತ್ತು ರಂಗಭೂಮಿ ಹಾಗೂ ಚಲನಚಿತ್ರ ನಟ ಕ್ಯಾಲಿ ಡಿ.ಎಸ್ ಅತ್ತಾವರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇನ್ನು ಕವಿ ಸಾಹಿತಿ ಗುಣಾಜೆ ರಾಮಚಂದ್ರ ಭಟ್ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಟಿ ನಡೆಸಿಯಿತು.ಈ ಸಂದರ್ಭದಲ್ಲಿ ದ.ಕನ್ನಡ ಜಿಲ್ಲೆಯ ಗೌರವಾಧ್ಯಕ್ಷರಾದಂತಹ ಇರಾ ನೇಮು ಪೂಜಾರಿ, ಉಳ್ಳಾಲದ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದಂತಹ ಎಡ್ವಡ್ರ್ಸ ಲೋಬೋ, ಚುಟುಕು ಸಾಹಿತ್ಯ ಪರಿಷತ್‍ನ ತಾಲೂಕು ಅಧ್ಯಕ್ಷರಾದ ಕಾ.ವೀ, ಕೃಷ್ಣ ದಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.