ಮಂಗಳೂರು: ಬಂಟರ ಮಾತೃ ಸಂಘದ 103ನೇ ವಾರ್ಷಿಕ ಸರ್ವ ಸದಸ್ಯರ ಸಭೆ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.

ಬಂಟ್ಸ್ ಹಾಸ್ಟೇಲ್ ನಲ್ಲಿರುವ ಶ್ರೀಮತಿ ಗೀತಾ ಎಸ್ ಎಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ 2022-23ನೇ ಸಾಲಿನ 103 ನೇ ವಾರ್ಷಿಕ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2022-23ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ ಮಂಡಿಸಿದರು. 2022-23ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳನ್ನು ಕೋಶಾಧಿಕಾರಿ ಸಿಎ. ರಾಮ್ ಮೋಹನ್ ರೈ ಟಿ ಮಂಡಿಸಿದರು.

ಸಭೆಯಲ್ಲಿ ವಿದ್ಯಾರ್ಥಿ ಭವನಗಳ, ಶಾಲಾ ಕಾಲೇಜುಗಳ, ತಾಲೂಕು ಸಮಿತಿಗಳ ವಾರ್ಷಿಕ ವರದಿಯನ್ನು ಮಂಡಿಸಲಾಯಿತು.
ಉಮೇಶ್ ರೈ ಪದವುಮೇಗಿನ ಮನೆ, ಶಾಲಿನಿ ಶೆಟ್ಟಿ, ಸಂಜೀವ ರೈ, ಕಾವು ಹೇಮನಾಥ ಶೆಟ್ಟಿ, ವಸಂತ ಶೆಟ್ಟಿ, ಮಿಥುನ್ ಹೆಗ್ಡೆ ಉಡುಪಿ, ವಿಜಯ ಶೆಟ್ಟಿ ಕಾರ್ಕಳ, ಆವರ್ಸೆ ಸುಧಾಕರ ಶೆಟ್ಟಿ, ದಯಾನಂದ ರೈ ಮನವಳಿಕೆ, ಜಯರಾಮ ಭಂಡಾರಿ, ಸುಧೀರ್ ಕುಮಾರ್ ರೈ ಉಪಸ್ಥಿತರಿದ್ದರು.
