HomeFresh Newsಅಪಾರ್ಟ್ ಮೆಂಟ್’ನಲ್ಲಿ ನೇಣು‌ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ

ಅಪಾರ್ಟ್ ಮೆಂಟ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹಗಳು ಪತ್ತೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments