ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜ್ಯೋತಿ (33) ಅವರು ಆತ್ಮಹತ್ಯೆ ಯತ್ನವೊಂದರಲ್ಲಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ.

ಕೌಟುಂಬಿಕ ವಿವಾದದ ನಂತರದ ತೀವ್ರ ಹತಾಶೆಯಲ್ಲಿ ಅವರು ಈ ಕೃತ್ಯ ಎಸಗಿದ್ದಾರೆಂದು ಹೇಳಲಾಗುತ್ತದೆ. ಪತಿ ಪತ್ನಿ ಇಬ್ಬರೂ ರಾಜಸ್ಥಾನದ ಭರತ್ ಪುರ ಜಿಲ್ಲೆಯವರು. “ಗಾಯಾಳುವನ್ನು ನಗರದ ಎ.ಜೆ ಆಸ್ಪತ್ರೆಗೆ ಸೇರಿಲಾಗಿದೆ. ಶಾಸ್ತ್ರಚಿಕಿತ್ಸೆ ನಡೆಯುತ್ತಿದೆ” ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.

ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅಮ್ಮನಿಗೆ ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ “ನನ್ನನ್ನು ಕ್ಷಮಿಸು ಅಮ್ಮಾ, ನಾನು ಸ್ವ ಇಚ್ಛೆಯಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ಯಾರೂ ಒತ್ತಡ ಹಾಕಿಲ್ಲ” ಎಂದು ಹಿಂದಿಯಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

Related Posts

Leave a Reply

Your email address will not be published.