ಮಂಗಳೂರು : ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡದಿಂದ ವಿದ್ಯಾರ್ಥಿಗೆ ಗಂಭೀರ ಹಲ್ಲೆ

ಮಂಗಳೂರು: ಮಂಗಳವಾರ ಸಂಜೆ ಮಂಗಳೂರು ಹೊರ ವಲಯದ ಅಡ್ಯಾರ್ ನಲ್ಲಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಬರಕ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಸಭಾನ್ ಎಂದು ತಿಳಿದುಬಂದಿದೆ.ಮಂಗಳೂರು ಖಾಸಗಿ ಆಸ್ಪತ್ರೆಗೆ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಮವಾರ ಯಾವುದೋ ಕಾರಣಕ್ಕೆ ವಿದ್ಯಾರ್ಥಿ ಸಭಾನ್ ಮತ್ತು ಅದೇ ಶಾಲೆಯ ಮತ್ತೋರ್ವ ವಿದ್ಯಾರ್ಥಿಯ ನಡುವೆ ಜಗಲ ಉಂಟಾಗಿತ್ತು ಎನ್ನಲಾಗಿದೆ. ಇದನ್ನು ನೆಪವಾಗಿಟ್ಟು ಕೊಂಡು ಮತ್ತೋರ್ವ ವಿದ್ಯಾರ್ಥಿಯ ಕಡೆಯ ಮಹಿಳೆ ಸಹಿತ ತಂಡವೊಂದು ಇಂದು ಶಾಲೆ ಬಿಟ್ಟು ಮನೆಗೆ ತೆರಳಲು ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಭಾನ್ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದೆ.ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿ ಜಸೀಲ್ ಮತ್ತು ಬುರ್ಖಾ ಧರಿಸಿದ ಮಹಿಳೆ ಸಹಿತ ತಂಡವೊಂದು ವಿದ್ಯಾರ್ಥಿಗೆ ಗಂಭೀರವಾಗಿ ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.