ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ

ಭಾರತ ಸರ್ಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿಯವರು ಪ್ರಧಾನಮಂತ್ರಿಗಳಾದ ಬಳಿಕ ದೇಶದಲ್ಲಿ ಸ್ವಚ್ಛತಾ ಆಂದೋಲನಾ ಜಾಗೃತಿ ಆರಂಭವಾಗಿದೆ. ಕಡಲ ತೀರ ಸ್ವಚ್ಛತಾ ಅಭಿಯಾನ ಕಳೆದ ಹತ್ತು ವರ್ಷಗಳಿಂದ ಆಗುತ್ತಿದೆ. ಈ ಕಾರ್ಯದಲ್ಲಿ ಕೈಜೋಡಿಸಿದ ಕೋಸ್ಟ್‍ಗಾರ್ಡ್ ಅಧಿಕಾರಿಗಳಿಗೆ ಮತ್ತು ಇತರ ಸಂಘ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪಾಲಿಕೆಯ ಆಯುಕ್ತರಾದ ಅಕ್ಷಯ್ ಶ್ರೀಧರ್ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

Related Posts

Leave a Reply

Your email address will not be published.