HomeFresh Newsಮಂಗಳೂರು ವಿಮಾನ ನಿಲ್ದಾಣಕ್ಕೆ KSRTC ಬಸ್‌ ಸಂಚಾರ ಆರಂಭ

ಮಂಗಳೂರು ವಿಮಾನ ನಿಲ್ದಾಣಕ್ಕೆ KSRTC ಬಸ್‌ ಸಂಚಾರ ಆರಂಭ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ.

ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್‌ 27ರಂದು ಬಸ್‌ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ.

ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ.

ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಬಸ್ಸು ಹೊರಡುತ್ತದೆ. ಮಂಗಳೂರಿನ ಜ್ಯೋತಿ ಜಂಕ್ಷನ್‌, ಲಾಲ್‌ಬಾಗ್‌, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ. ಒಬ್ಬರಿಗೆ 100 ರೂ. ದರ ನಿಗದಿಪಡಿಸಲಾಗಿದೆ.

ಹಾಗೆಯೇ ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 7.15, 8.45, ಸಂಜೆ 5.15ಕ್ಕೆ ಹೊರಡಲಿದೆ. ವಿಮಾನ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 10.45, ಮಧ್ಯಾಹ್ನ 12.30 ಮತ್ತು ರಾತ್ರಿ 9.15ಕ್ಕೆ ಹೊರಡಲಿದೆ.

300 ರೂ. ಟಿಕೆಟ್‌ ದರ ನಿಗದಿ ಮಾಡಲಾಗಿದೆ. ಮಂಗಳೂರಿನಿಂದ ಮಣಿಪಾಲಕ್ಕೂ ವೋಲ್ವೊ ಬಸ್‌ ಸೇವೆ ಪುನರಾರಂಭಿಸಲು ಉದ್ದೇಶಿಸಲಾಗಿದೆ.

ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್‌ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ನಿಲ್ಲಿಸಲಾಗಿತ್ತು.

ಇದೀಗ ಮತ್ತೆ ಈ ಮಾರ್ಗದಲ್ಲಿ 2 ಟ್ರಿಪ್‌ ಕಾರ್ಯಾಚರಿಸಲು ನಿರ್ಧರಿಸಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್‌ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲ ದಿಂದ ಮಂಗಳೂರಿಗೆ ಒಂದು ಟ್ರಿಪ್‌ ನಡೆಸಲಿದೆ. ಟಿಕೆಟ್‌ ದರ 150 ರೂ. ನಿಗದಿಪಡಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments