ಮಂಗಳೂರು: ಆಲಿಯಬ್ಬ ಜೋಕಟ್ಟೆ ಅವರ ‘ಬ್ಯಾರಿ: ನಾನು ಕಂಡಂತೆ’ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ‘ಬ್ಯಾರಿ:ನಾನು ಕಂಡಂತೆ’ ಕೃತಿ ಬಿಡುಗಡೆಕಾರ್ಯಕ್ರಮ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.

ಮಂಗಳೂರು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್
ಹಿರಿಯ ಸಾಹಿತಿ ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ ಬರೆದ ‘ಬ್ಯಾರಿ:ನಾನು ಕಂಡಂತೆ’ ಕೃತಿ ಬಿಡುಗಡೆಗೊಳಿಸಿದರುಬಳಿಕ ಮಾತನಾಡಿದ ಅವರು ಬ್ಯಾರಿ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗೆ ಸಂಬಂಧಿಸಿದಂತೆ ನಡೆಯುವ ಅಧ್ಯಯನವು ತಳಸ್ಪರ್ಶಿಯಾಗಬೇಕು. ಆವಾಗ ಮಾತ್ರ ಬ್ಯಾರಿ ಕ್ಷೇತ್ರ ಕಾರ್ಯದ ವಿಸ್ತರಣೆ ಸಾಧ್ಯ ಎಂದರು.

ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಇಸ್ಮಾಯಿಲ್ ಎನ್. ಉದ್ಘಾಟಿಸಿ ಮಾತನಾಡಿದರು.

ಕೃತಿಕಾರ ಆಲಿಯಬ್ಬ ಜೋಕಟ್ಟೆ ಕೃತಿ ರಚನೆಗೆ ಸಂಬಂಧಿಸಿದಂತೆ ತನ್ನ ಅನುಭವ ಹಂಚಿಕೊಂಡರು. ಪತ್ರಕರ್ತ ಹಂಝ ಮಲಾರ್ ಕೃತಿ ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮುಹಮ್ಮದ್ ಸ್ವಾದಿಕ್, ಆಯಿಶಾ ಝಹೀಮಾ, ಮುಹಮ್ಮದ್ ಸಿಮಕ್, ನೌಶೀನಾ ಅವರು ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ವಿಚಾರ ಮಂಡಿಸಿದರು.

ಅತಿಥಿಗಳಾಗಿ ಭಾಗವಹಿಸಿದ್ದ ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ, ಬ್ಯಾರಿ ವಾರ್ತೆಯ ಸಂಪಾದಕ ಬಶೀರ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್‌ನ ಅಧ್ಯಕ್ಷ ಖಾಲಿದ್ ಉಜಿರೆ, ‘ಮೇಲ್ತೆನೆ’ಯ ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್, ಬ್ಯಾರಿ ಅಕಾಡಮಿಯ ರಿಜಿಸ್ಟ್ರಾರ್ ಆರ್. ಮನೋಹರ ಕಾಮತ್ .ಅಧ್ಯಯನ ಪೀಠದ ಸದಸ್ಯರಾದ ಸಮೀರಾ ಕೆ.ಎ. . ಖಾಲಿದ್ ತಣ್ಣೀರುಬಾವಿ. ಶಹಲಾ ರಹ್ಮಾನ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.