ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಬಾಲಾಲಯ ಪ್ರತಿಷ್ಠೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ ವಿಧಿ ವಿಧಾನಗಳನ್ನು ನಡೆಸಿ ಶ್ರೀ ಕೃಷ್ಣದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಶ್ರೀ ವಿಶ್ವಕರ್ಮ ಪ್ರಾರ್ಥನೆ ಹಾಗೂ ವೀಳ್ಯ ಮುಹೂರ್ತ ನೆರವೇರಿಸಲಾಯಿತು.

ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಸುಂದರ್ ಅಂಚನ್, ನೀರಜ ಸುಂದರ್ ಅಂಚನ್, ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಅವಿನಾಶ್ ಅಂಚನ್, ಮನಪಾ ಸದಸ್ಯರಾದ ಶಕೀಲ ಕಾವ ಮತ್ತು ವನಿತಾ ಪ್ರಸಾದ್, ಶ್ರೀ ಕೃಷ್ಣ ಭಜನಾ ಮಂದಿರದ ಟ್ರಸ್ಟಿಗಳು, ರಜತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

add- arebhashe

Related Posts

Leave a Reply

Your email address will not be published.