ಮಂಗಳೂರು: ಬಿಜೆಪಿ ಯುವ ಮೋರ್ಚಾ ಸಭೆ
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚ ದಕ್ಷಿಣ ಕನ್ನಡ ಜಿಲ್ಲೆಯ ಸಭೆಯು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆ ಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಳ ರವರು ಉದ್ಘಾಟನೆ ಭಾಷಣ ಮಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿ ಗಳ ಹಾಗೂ ಪಕ್ಷಕ್ಕೆ ಯುವಕರ ಪಾತ್ರ ಏನು ಎಂಬುದರ ಬಗ್ಗೆ ವಿವರಿಸಿ ನೂತನ ತಂಡಕ್ಕೆ ಶುಭ ಕೋರಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಮತ್ತು ಯತೀಶ್ ಆರ್ವರ್ ನೂತನ ತಂಡಕ್ಕೆ ಶುಭ ಕೋರಿ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು .ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಾಧಾ ನಂದನ್ ಮಲ್ಯರವರು ಮಾತನಾಡಿ ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲನೆ ಮಾಡಿ ಸದೃಢ ಸಮಾಜ ದಲ್ಲಿ ಯುವ ತಂಡ ಬಲಿಷ್ಠ ವಾಗಿರಲು ಪದಾಧಿಕಾರಿಗಳ ಸಹಕಾರ ವನ್ನು ಕೋರಿ ದರು ಪ್ರಧಾನ ಕಾರ್ಯದರ್ಶಿಗಳಾದ ಭರತ್ ರಾಜ್ ಸ್ವಾಗತಿಸಿ ಉಮೇಶ್ ಕುಲಾಲ್ ಧನ್ಯವಾದವಿತರು.