ಮಂಗಳೂರು: ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಬ್ರಿಜೇಶ್ ಚೌಟ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮಂಗಳೂರಿನ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನ್ಯಾಯಾಲಯ ನಿಯೋಜಿತ ರಿಸೀವರ್ ಕೆ ಉಮೇಶ್ ಆಚಾರ್ಯ ಪಾಂಡೇಶ್ವರ, ಮನಪಾ ಮಣ್ಣಗುಡ್ಡೆ ಕಾರ್ಪೊರೇಟರ್ ಶ್ರೀಮತಿ ಬಿ ಸಂಧ್ಯಾ ಮೋಹನ್ ಬಿಜೆಪಿ ಯ ಪ್ರಮುಖರಾದ ಬಿ ಮೋಹನ್ ಮುಂತಾದವರು, ಶ್ರೀ ಕ್ಷೇತ್ರದ ಮಾಜಿ ಮಾಜಿ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ, ಮಾಜಿ ಮೂರನೇ ಮೊಕ್ತೇಸರ ಎ ಲೋಕೇಶ್ ಆಚಾರ್ಯ, ಚಿಲಿಂಬಿ, ಕ್ಷೇತ್ರದ ಮಾಜಿ ಆಡಳಿತ ಮಂಡಳಿಯ ಸದಸ್ಯರು, ಶ್ರೀ ಕಾಳಿಕಾಂಬಾ ಸೇವಾ ಸಮಿತಿ, ವಿಶ್ವಬ್ರಾಹ್ಮಣ ಮಹಿಳಾ ಸಮಿತಿ, ದ. ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿಶ್ವಕರ್ಮ ಯುವ ವೇದಿಕೆ, ವಿಶ್ವಕರ್ಮ ಯುವ ಮಿಲನದ ಸದಸ್ಯರು, ಶ್ರೀ ಗುರು ಸೇವಾ ಪರಿಷತ್ ಸದಸ್ಯರು ಹಾಗೂ ಅನೇಕ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.