ಮಂಗಳೂರು : ಜೂನ್ 16 ರಂದು ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್-2024
ಮಂಗಳೂರು : ಸತತ ಮೂರನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2024 ಕಾರ್ಯಕ್ರಮವು ಜೂನ್ 16 ರಂದು ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೊಲ್ನಾಡಿನಲ್ಲಿ ನಡೆಯಲಿದೆ ಎಂದು ಸ್ಯಾಂಡೀಸ್ ಕಂಪನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ತಿಳಿಸಿದರು.
ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಜೂನ್ 16ರಂದು ಭಾನುವಾರ ಸಂಜೆ 3 ಗಂಟೆಗೆ ಸರಿಯಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿತ್ರನಟ ವಿಜಯ ರಾಘವೇಂದ್ರ, ಹಿನ್ನೆಲೆ ಗಾಯಕಿ ಅನುರಾಧ ಭಟ್, ನಟರಾದ ಸಿದ್ದು ಮೂಲಿಮನೆ, ತುಳು ಸಿನಿತಾರೆಯರಾದ ರೂಪೇಶ್ ಶೆಟ್ಟಿ, ಪೃಥ್ವಿ ಅಂಬರ್, ಸೋನಾಲ್ ಮೊಂತೆರೋ ಭಾಗವಹಿಸಲಿದ್ದಾರೆ.
ಈ ಬಾರಿ 2023ರಲ್ಲಿ ತೆರೆಕಂಡ ಒಟ್ಟು 11 ಸಿನಿಮಾಗಳು ಸ್ಪರ್ಧೆಯಲ್ಲಿದ್ದು, ಲೈಫ್‌ಟೈಮ್ ಅಚೀವ್ಮೆಂಟ್ ಅವಾರ್ಡ್ ಹಾಗೂ ವರ್ಸಟೈಲ್ ಆಕ್ಟರ್ ಅವಾರ್ಡ್ ಸೇರಿ ಒಟ್ಟು 30 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು , ಪ್ರವೇಶವು ಉಚಿತವಾಗಿರಲಿದೆ ಎಂದು ಮಾಹಿತಿ ನೀಡಿದರು.