ಕಡಬದಲ್ಲಿ ದಾರಿ ತಕರಾರು ಪರಿಶೀಲಿಸಿದ ಜಿಲ್ಲಾಧಿಕಾರಿ

ಕಡಬದಲ್ಲಿ ಜರಗಿದ ಡಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ 45ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದರು. ದಾರಿ ತಕರಾರುಗಳ ಅರ್ಜಿಗಳನ್ನು ಪರಿಶೀಲಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಪಿಡಿಓಗಳು ಹಾಗೂ ಕಂದಾಯ ಅಧಿಕಾರಿಗಳಿಗೆ ಆದೇಶಿಸಿದರು. 11 ಇ ಅರ್ಜಿಗಳ ವಿಲೇವಾರಿಗೆ ವೇಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದವರು ಆ ಬಗ್ಗೆ ಪ್ರತಿದಿನ ಪ್ರಗತಿ ವರದಿ ನೀಡುವಂತೆ ತಾಕಿತು ಮಾಡಿದರು. ಕಡಬ ತಹಶೀಲ್ದಾರ್ ಅನಂತಶಂಕರ್ ಬಿ ಉಪ ತಹಸೀಲ್ದಾರ್ ಮನೋಹರ್ ಕೆ.ಟಿ,ಗೋಪಾಲ್ ಕಲ್ಲುಗುಡ್ಡೆ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಳೆ ಮತ್ತಿತರಿದ್ದರು.ಡಿಸಿ ಕಡಬ ಪಟ್ಟಣ ಪಂಚಾಯತ್ ಕಚೇರಿಗೆ ಭೇಟಿ ನೀಡಿದರು ಮುಖ್ಯ ಅಧಿಕಾರಿ ಪಕೀರ ಮೂಲ್ಯ ಹಾಜರಿದ್ದರು.
