ಮಂಗಳೂರು: ಖೋಟಾ ನೋಟು ಚಲಾವಣೆ: ಓರ್ವನ ಬಂಧನ
ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.
ಆರೋಪಿಯು 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9ಸಾವಿರ ರೂ. ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.