ಮಂಗಳೂರು: ಶ್ರೀ ರಾಮಕೃಷ್ಣ ಶಾಲೆಯಲ್ಲಿ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಮಂಗಳೂರಿನ ಶ್ರೀ ರಾಮಕೃಷ್ಣ ಶಾಲೆಯಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಶಾಲೆಯ ಅಡಿಟೋರಿಯಂನಲ್ಲಿ ಸಂಭ್ರಮದಿಂದ ಆಚರಿಸಿದರು.
ಶಾಲೆಯ ಪ್ರಾಂಶುಪಾಲರಾದ ಡಾ. ಪ್ರೆಸಿಲ್ಲಾ ಮತ್ತು ಉಪಪ್ರಾಂಶುಪಾಲರಾದ ರೂಪಾ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಇಬ್ಬರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು.
ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.