ಮಂಗಳೂರು : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ವೈಷ್ಣವಿಗೆ ಸನ್ಮಾನ
ಕುಲಶೇಖರದ ಕಟ್ಟೆ ಫ್ರೆಂಡ್ಸ್ ವತಿಯಿಂದ 26ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಊರ ಹತ್ತು ಸಮಸ್ತರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಅಶ್ವಥ ಕಟ್ಟೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕುಮಾರಿ ವೈಷ್ಣವಿ ಯವರಿಗೆ ಶಾಲು ಹೊದಿಸಿ ಫಲ ಪುಷ್ಪ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್, ಕಾರ್ಪೊರೇಟರ್ ರಾದ ಭಾಸ್ಕರ್ ಕೆ. ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಊರ ಸಮಸ್ತರು ಉಪಸ್ಥಿತರಿದ್ದರು.