ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ.

ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು.

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್ ಶೆಟ್ಟಿ ಭಾಗವಹಿಸಿದ್ದರು.

ಮೇಯರ್ ಹುದ್ದೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣದಿಂದ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯುವಂತಾಯಿತು.

ಪಾಲಿಕೆಯಲ್ಲಿ ಪ್ರಸಕ್ತ ಬಿಜೆಪಿ ಆಡಳಿತ ಮುಂದಿನ ವರ್ಷದ ಫೆಬ್ರವರಿ 27 ರವರೆಗೆ ಇರುವ ಕಾರಣದಿಂದ ಸುಮಾರು ಐದೂವರೆ ತಿಂಗಳು ಮಾತ್ರ ಮೇಯರ್ ಉಪಮೇಯರ್ ಅಧಿಕಾರಾವಧಿ ಇರಲಿದೆ.

Add - Clair veda ayur clinic

Related Posts

Leave a Reply

Your email address will not be published.