ಮಂಗಳೂರು: ಆ.29ರಂದು ಕರಾವಳಿಯಾದ್ಯಂತ ನೆತ್ತೆರೆಕೆರೆ ಸಿನಿಮಾ ಬಿಡುಗಡೆ

ಮಂಗಳೂರು:ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ನೆತ್ತೆರೆಕೆರೆ ತುಳು ಸಿನಿಮಾ ಆಗೋಸ್ಟ್ ೨೯ ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡದವರು ಮಾಹಿತಿ ನೀಡಿದರು. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಠಿಸಲಿದೆ. ನೆತ್ತೆರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ, ಪ್ರೇಕ್ಷಕರಲ್ಲಿ ಕಾತರ,ಕುತೂಹಲ ಹೆಚ್ಚಿದೆ. ಈ ಸಿನಿಮಾವು ಕರಾವಳಿ ಭಾಗವಾದ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.
ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕಥೆ, ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ.ವಿಶೇಷ ಪ್ರಾತದಲ್ಲಿ ಬಹುಭಾಷಾ ತಾರಾ ಟ ಸುಮನ್ ತಲ್ವಾರ್,ಲಂಚುಲಾಲ್ ಕ.ಎಸ್.ಅಭಿನಯಿಸಿದ್ದಾರೆ.

ಸಿನಿಮಾದಲ್ಲಿ ಯುವ ಶೆಟ್ಟಿ, ಪುಷ್ಪರಾಜ್ ಬೊಳ್ಳೂರು, ಅನಿಲ್ ಉಪ್ಪಳ, ಭವ್ಯಾ ಪೂಜಾರಿ, ಪೃಥ್ವಿನ್ ಪೊಳಲಿ, ಉತ್ಸವ್ ವಾಮಂಜೂರು, ನೀತ್ ಪೂಜಾರಿ, ವಿಜಯ ಮಯ್ಯ ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ ,ಉಪಿರ, ನಮಿತ, ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ ಅಭಿನಯಿಸಿದ್ದಾರೆ.
ನೆತ್ತೆರೆಕೆರೆ ಸಿನಿಮಾ ಮಂಗಳೂರಿನಲ್ಲಿ ಪಿವಿರ್ , ಸಿನಿಪೊಲಿಸ್,ಭಾರತ್ ಸಿನಿಮಾಸ್,ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ ,ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್ ,ಉಡುಪಿಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್,ಭಾರತ್ ಸಿನಿಮಾಸ್,ಕಾರ್ಕಳದಲ್ಲಿ ರಾಧಿಕ,ಪ್ಲಾನೆಟ್,ಬೆಳ್ತಂಗಡಿಯಲ್ಲಿ ಭಾರತ್, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನೆತ್ತೆರೆಕರೆರೆ ಸಿನಿಮಾ ತೆರೆ ಕಾಣಲಿದೆ.
ಈ ಸಂದರ್ಭದಲ್ಲಿ ಸುದ್ದಿಗೋಷ್ಟಿಯಲ್ಲಿ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್. ಸಿನಿಮಾ ನಿರ್ದೇಶಕ ನಟ ಸ್ವರಾಜ್ ಶೆಟ್ಟಿ, ನಟಿ ದಿಶಾಲಿ ಪೂಜಾರಿ, ಯುವ ಶೆಟ್ಟಿ, ಗಣೇಶ್ ನೀರ್ಚಾಲ್, ಸಚಿನ್ ಎಸ್. ಉಪ್ಪಿನಂಗಡಿ ಉಪಸ್ಥಿತರಿದ್ದರು.