ಮಂಗಳೂರು: ಮಾ.17ರಂದು ಗುರು-ಶಿಷ್ಯರ ಸಮ್ಮಿಲನ
ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಅಲ್ಯುಮ್ನಿ ಅಸೋಸಿಯೇಷನ್ ಆಶ್ರಯದಲ್ಲಿ ಮಾರ್ಚ್ 17ರಂದು ಬೆಳಗ್ಗೆ 9.30ರಿಂದ ಸಂಜೆ 4ರ ತನಕ ಗುರು -ಶಿಷ್ಯರ ಸಮ್ಮಿಲನ ‘ಗುರುಭ್ಯೋ ನಮಃ’ ಕಾರ್ಯಕ್ರಮ ನಡೆಯಲಿದೆ.
1982ರಿಂದ 2024ರವರೆಗಿನ 41 ವರ್ಷಗಳ ಸುದೀರ್ಘ ಕಾಲದಲ್ಲಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳ ಹಾಗೂ ಕಲಿಸಿದ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಒಂದೇ ಕಡೆ ಕಲೆ ಹಾಕುವ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಲೇಜಿನ ಸಂಚಾಲಕ ವಸಂತ ಕಾರಂದೂರು ಅಧ್ಯಕ್ಷತೆ ವಹಿಸುವರು. ಶಿವಭಕ್ತಿ ಯೋಗ ಸಂಘದ ಉಪಾಧ್ಯಕ್ಷರಾದ ಶೇಖರ ಪೂಜಾರಿ, ಬಿ.ಜಿ ಸುವರ್ಣ, ಪ್ರಾಂಶುಪಾಲೆ ಡಾ.ಆಶಾಲತಾ ಸುವರ್ಣ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಸಿಎ ನಂದಗೋಪಾಲ ಶೆಣೈ, ಉದ್ಯಮಿಗಳಾದ ಪ್ರಶಾಂತ ಸನಿಲ್, ಹರೀಶ್ ಶೇರಿಗಾರ್, ಚಂದನ್‌ದಾಸ್, ಹರೀಶ್, ಜಿತೇಂದ್ರ ಕೊಟ್ಟಾರಿ, ನಿವೃತ್ತ ಪ್ರಾಂಶುಪಾಲ ಡಾ.ಶ್ರೀಧರ ಮಣಿಯಾಣಿ, ಕಾರ್ಪೊರೇಟರ್ ಮನೋಹರ ಶೆಟ್ಟಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗೆ ಗೌರವ ವಂದನೆ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.