ಮಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆ ಕಾರ್ಯಾಚರಣೆ : ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ

ಮಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ನಡೆಸಲಾದ ಕಾರ್ಯಾಚರಣೆ ವೇಳೆ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು ೩೦೦ ಮಂದಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಅವರೆಲ್ಲರೂ ನಿಖರವಾಗಿ ಅಕ್ರಮ ವಲಸಿಗರು ಎಂದು ಹೇಳಲಾಗದಿದ್ದರೂ ಈವರೆಗಿನ ಪರಿಶೀಲನೆ ಸಂದರ್ಭದಲ್ಲಿ ಸೂಕ್ತ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಪೈಕಿ ೨೫೦ ಮಂದಿಯನ್ನು ನಗರದ ರೋಸಾರಿಯೊ ಸಭಾಂಗಣಕ್ಕೆ ಕರೆತರಲಾಗಿದ್ದು, ಇಂದು ಅವರೆಲ್ಲರ ದಾಖಲೆಗಳ ಬಗ್ಗೆ ಅಂತಿಮ ಪರಿಶೀಲನೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.