HomeFresh Newsಮಂಗಳೂರು: ಮಾ.10ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ: 9 ಮಂದಿ ಪತ್ರಕರ್ತರಿಗೆ ಗೌರವ ಸನ್ಮಾನ

ಮಂಗಳೂರು: ಮಾ.10ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ: 9 ಮಂದಿ ಪತ್ರಕರ್ತರಿಗೆ ಗೌರವ ಸನ್ಮಾನ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ.

ಹಿರಿಯ ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್,  ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಅಶೋಕ್. ಶೆಟ್ಟಿ ಬಿ.ಎನ್.V4 ನ್ಯೂಸ್ ನ ವರದಿಗಾರ ಶರತ್ ಸಾಲಿಯಾನ್ ಇವರುಗಳು ಪ್ರೆಸ್‌ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.

ನಟ, ನಿರ್ದೇಶಕ  ನಟ ದೇವದಾಸ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದು,  ಶಾಸಕ ಡಾ.ವೈ.ಭರತ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದಶ್ ಶಾ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್,  ಪ್ರೆಸ್‌ಕ್ಲಬ್ನ ಸ್ಥಾಪಕ ಅಧ್ಯಕ್ಷ  ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ , ಪ್ರೆಸ್‌ಕ್ಲಬ್ನ  ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿರುವರು. ಇದೇ ಸಂದರ್ಭ ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆಗೈದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರಿಗೆ ಪ್ರೆಸ್‌ಕ್ಲಬ್‌ನ  ವರ್ಷದ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments