ಮಂಗಳೂರಿನಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದ.ಕ ಜಿಲ್ಲೆ ರಾಷ್ಟ್ರೀಯತೆಯ ಪ್ರಯೋಗ ಶಾಲೆ ಎಂದರು.ಭಾರತ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಹೊಂದಿದೆ. ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚಿತವಾದ ಈ ಸಂವಿಧಾನ ಸಾಮಾನ್ಯರು ದೇಶದ ಉನ್ನತ ಸ್ಥಾನಕ್ಕೆ ಏರುವ ಅವಕಾಶ ಕಲ್ಪಿಸಿದೆ ಸಂವಿಧಾನದ ತಳಹದಿಯ ಮೂಲಕ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಿಷ್ಠಗೊಳಿಸೋಣ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೆÇಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಮೊದಲಾದವರು ಉಪಸ್ಥಿತರಿದ್ದರು.ಪೆÇಲೀಸ್ ಬ್ಯಾಂಡ್, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯ ಕ್ರಮ, ಪ್ರತಿಭಾ ಪುರಸ್ಕಾರ, ಕವಾಯತು, ವಿಂಟೇಜ್ ಕಾರುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.