ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರಿಗೆ ತುಳು ಅಕಾಡೆಮಿಯಿಂದ ಸನ್ಮಾನ
ಕರ್ನಾಟಕ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್ ಉಪಸ್ಥಿತರಿದ್ದರು.