ಡಿ.16, 17ರಂದು ಮಂಗಳೂರು ಟೆಕ್ನೋವಾನ್‍ಝ

ಕರ್ನಾಟಕ ಡಿಜಿಟಲ್ ಎಕಾನಮಿ, ಮಿಷನ್, ಕೆ-ಟೆಕ್ ಮತ್ತು ಬಿಯಾಂಡ್ ಬೆಂಗಳೂರು ಸಹಯೋಗದಲ್ಲಿ ಮಂಗಳೂರು ಟೆಕ್ನೋವಾನ್‍ಝ ಡಿಸೆಂಬರ್ 16 ಮತ್ತು 17ರಂದು ನಗರದ ಡಾ. ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಯಲಿದೆ. ಡಿ.17ರಂದು ಬೆಳಿಗ್ಗೆ 6.30ಕ್ಕೆ ವಾಕಥಾನ್ ನಡೆಯಲಿದೆ. ಬೆಳಗ್ಗೆ 10ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಇಲೆಕ್ಟ್ರಾನಿಕ್ಸ್, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್, ಇಲೆಕ್ಟ್ರಾನಿಕ್ಸ್, ಐಟಿ-ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್‍ನ ಚೇರ್ಮನ್ ಬಿ.ವಿ. ನಾಯ್ಡು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


