ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಜೈನ್ ವಿವಿಯ ಪ್ರಕರಣವನ್ನು ಖಂಡಿಸಿ ನಡೆಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಬೋಧಕ ಹಾಗೂ ಬೋಧಕೇತರ ವರ್ಗದವರು ಬಾಗವಹಿಸಿದರು. ಈ ಶಾಂತಿಯುತ ಪ್ರತಿಭಟನೆಯಲ್ಲಿ ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಅವಿನಾಶ್ ಕಾಂಬ್ಳೆ, ವಿಜಯ್ ಕುಮಾರ್, ಗೋವಿಂದ್ ಹಾಗೂ ಸುರೇಶ್ ಉಪಸ್ಥಿತರಿರುತ್ತಾರೆ.

