ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು

ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ(Thumbe Dam) ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು ನೀರಿನ ಸಮಸ್ಯೆ(Water Crisis) ಎದುರಾಗುವ ಬಗ್ಗೆ ಈ ಹಿಂದೆ ವರದಿ ಮಾಡಲಾಗಿತ್ತು. ಈ ಸಂಬಂಧ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದೆ. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ಮಂಗಳೂರು ನಗರ ಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.

ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿದೆ. ಈ ಬಗ್ಗೆ ಸಾಧಕ ಭಾದಕಗಳನ್ನು ಪರಿಶೀಲಿಸಿ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ.

ಜಿಲ್ಲಾಡಳಿತ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಹೀಗಿವೆ

  • ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ನಿರ್ಣಯಿಸಲಾಗಿದೆ.
  • ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು.
  • ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು.
  • ಮೇ 5ರಂದು ಮಂಗಳೂರು ನಗರ ಉತ್ತರಕ್ಕೆ, ಮೇ 6 ರಂದು ಮಂಗಳೂರು ನಗರ ದಕ್ಷಿಣ, ನಂತರ ಕ್ರಮಾನುಗತವಾಗಿ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿರುತ್ತದೆ.
  • ಲಭ್ಯವಿರುವ ನೀರನ್ನು ಮೇಲೆ ತಿಳಿಸಿದಂತೆ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ಮೇಲಿನ ವಿಷಯವನ್ನು ಮನಗಂಡು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

Related Posts

Leave a Reply

Your email address will not be published.