ಜಿಲ್ಲಾಧಿಕಾರಿಯವರ ಮೊಬೈಲ್ ನಂಬರ್ ಹ್ಯಾಕ್:ಮೋಸ ಹೋಗದಂತೆ ಡಿಸಿ ಮನವಿ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,
8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.
8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.