ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತಕ್ಕೆ ಹದಿಮೂರು ವರ್ಷ

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ ಬಂದು ಇನ್ನೇನು ಇಳಿಯಲು ಸಿದ್ಧತೆ ನಡೆಸುತ್ತಿದ್ದರು. ನಸು ನಿದ್ದೆಯಲ್ಲಿದ್ದವರು ಭೀಕರ ಅಗ್ನಿಯಲ್ಲಿ ಸುಟ್ಟು ಕರಕಲಾದದ್ದು ಎಂದಿಗೂ ಮರೆಯಲಾಗದ್ದು.

ಬಜಪೆ ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ. ಇಂದು ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.

Related Posts

Leave a Reply

Your email address will not be published.