ಮಂಗಳೂರು ; ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ ವಿಮಾನವನ್ನು ವಾಪಾಸ್ ತಂದರು ಎಂದು ತಿಳಿದು ಬಂದಿದೆ. ಬಳಿಕ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ಪ್ರಯಾಣಿಕರು ತೆರಳಿದರು.
