ಮೃತರ ಕುಟುಂಬಕ್ಕೆ ಪರಿಹಾರ – ಜಿಲ್ಲಾಡಳಿತದಿಂದ ಅಗತ್ಯ ಕ್ರಮ : ಡಿಸಿ

*ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್ ಹೋಬಳಿ ಕುಳಾಯಿ ಗ್ರಾಮದ ಸಂತೋಷ್ (34 ವರ್ಷ) ಜು.5ರ ಬುಧವಾರ ಬೆಳಿಗ್ಗೆ ಬೈಕಂಪಾಡಿಯಲ್ಲಿರುವ ಸೋಲಾರ್ ಕಂಪೆನಿಗೆ ಮನೆಯಿಂದ ಕೆಲಸಕ್ಕೆ ತೆರಳುವಾಗ ಮರ ಬಿದ್ದು ದಾರಿ ಬಂದ್ ಆದ ಕಾರಣ ಕಂಪೌಂಡ್ ಹಾರಲು ಯತ್ನಿಸಿದಾಗ ಮರದೊಂದಿಗೆ ಬಿದ್ದ ವಿದ್ಯುತ್ ದೀಪದ ತಂತಿ ತಗುಲಿ ಮರಣ ಹೊಂದಿರುತ್ತಾರೆ.ಈ ಬಗ್ಗೆ ಮಂಗಳೂರು ತಹಶೀಲ್ದಾರರು ವರದಿ ಸಲ್ಲಿಸಿರುತ್ತಾರೆ.ಮೃತರ ವಾರಸುದಾರರಿಗೆ ಮೆಸ್ಕಾಂ ಇಲಾಖಾ ವತಿಯಿಂದ 5 ಲಕ್ಷ ರೂ.ಗಳ ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.