ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ – ಕಮೀಷನರ್
ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ. ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಹಾಕಿದಲ್ಲಿ, ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.