ಮಂಗಳೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಸಾಮೂಹಿಕ ಸಮುದ್ರ ಪೂಜೆ
ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆಯಿತು.
ಪ್ರತೀ ಗ್ರಾಮದಿಂದ ಸಂಗ್ರಹಿಸಿದ ಹಾಲು, ತೆಂಗಿನಕಾಯಿಗಳನ್ನು ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ ನಂತರ ಭಜನೆಯೊಂದಿಗೆ ಕಡಲ ಕಿನಾರೆಗೆ ಆಗಮಿಸಿ ಗಂಗಾ ಮಾತೆಗೆ ಸಮರ್ಪಣೆ ಮಾಡಲಾಯಿತು.
ಮುಂದಿನ ಮೀನುಗಾರಿಕೆಯ ಅವಧಿಯಲ್ಲಿ ಮೀನುಗಾರರಿಗೆ ಒಳಿತಾಗಲಿ ಎಂದು ಕದ್ರಿ ಜೋಗಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥ್ ಜೀ ಮಹರಾಜ್ ಅವರು ಸಮುದ್ರಕ್ಕೆ ಹಾಲು- ಪುಷ್ಪ ಅರ್ಪಿಸಿ ಪ್ರಾರ್ಥಿಸಿದರು.
ಏಳು ಪಟ್ಣದ ಅಧ್ಯಕ್ಷ ಸುಭಾಸ್‍ಚಂದ್ರ ಕಾಂಚನ್ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಉರ್ವ ಏಳು ಪಟ್ಣ ಮೊಗವೀರ ಸಂಯುಕ್ತ ಸಭಾದ ಅದ್ಯಕ್ಷ ಲೋಕೇಶ್ ಸುವರ್ಣ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಾರಾಯಣ ಕೋಟ್ಯಾನ್, ಏಳು ಪಟ್ಣ ಸಮಿತಿಯ ಉಪಾಧ್ಯಕ್ಷ ಹೇಮಚಂದ್ರ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಶ್ಯಾಮ ಸುಂದರ ಕಾಂಚನ್, ಜತೆ ಕಾರ್ಯದರ್ಶಿ ವಿಶುಕುಮಾರ್, ಕೋಶಾಧಿಕಾರಿ ರಂಜನ್ ಕಾಂಚನ್, ದ.ಕ ಜಿಲ್ಲಾ ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಉಷಾರಾಣಿ ಬೊಳೂರು, ಗ್ರಾಮದ ಗುರಿಕಾರರು, ಅಧ್ಯಕ್ಷರು, ಪದಾಧಿಕಾರಿಗಳು, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.