HomeFresh Newsಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್...

ಮಂಗಳೂರು: ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರನ್ನು ವರ್ಗಾವಣೆ ಮಾಡಲಾಗಿದ್ದು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕುಲದೀಪ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದು ಜನರ ಪ್ರೀತಿ-ಗೌರವಗಳಿಗೆ ಪಾತ್ರರಾಗಿದ್ದರು.

ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‍ಪುರದವರು. ಈ ಹಿಂದೆ ಕರ್ನಾಟಕ ಪೆÇಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೆÇಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments