ಮಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಬಗ್ಗೆ ಚಿಂತನೆ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹುಕ್ಕಾ ಬಾರ್‍ಗಳಿಂದ ತೊಂದರೆ ಆಗುತ್ತಿದೆ. ಸಾರ್ವಜನಿಕರಿಗೆ ಆನಾರೋಗ್ಯ ಕಾಡುತ್ತಿದೆ. ಕಾಯ್ದೆಗೆ ತಿದ್ದುಪಡಿ ಮಾಡಿ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧದ ಬಗ್ಗೆ ಚಿಂತನೆ ನಡೆಸಲಾಗಿದೆ. ಹುಕ್ಕಾ ಬಾರ್‍ಗಳಿಂದ ಬೇರೆ ಬೇರೆ ದುಷ್ಪಾರಿಣಾಮಗಳು ಉಂಟಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹುಕ್ಕಾ ಬಾರ್ ಇರಬಾರದು ಎಂದು ಹೇಳಿದರು.
ಕಾವೇರಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಾವೇರಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಿದೆ. ವಸ್ತುಸ್ಥಿತಿ ಅಧ್ಯಯನ ಮಾಡಿ ರಿಯಾಲಿಟಿ ಮೇಲೆ ಹೋಗಬೇಕಿದೆ.

ರಾಜ್ಯದಲ್ಲಿ ಮಳೆ ಕೂಡ ಕಡಿಮೆಯಾಗಿದೆ. ನಮ್ಮಲ್ಲೇ ನೀರಿಲ್ಲ. ರಾಜಕೀಯವಾಗಿ ಎಲ್ಲರೂ ಚರ್ಚಿಸೋಣ ಎಂದ ಅವರು, ಕೋರ್ಟ್‍ಗಳು ಆದೇಶ ಕೊಡುತ್ತದೆ. ಕೆಲವು ವಿಚಾರಗಳಲ್ಲಿ ಜನತೆಯ ಪರ ನಿಲ್ಲಬೇಕಿದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಮೂವರು ಡಿಸಿಎಂಗಳ ಬಗ್ಗೆ ಚರ್ಚೆಯಾಗುತ್ತಿದೆ. ಮೂವರನ್ನು ಡಿಸಿಎಂ ಮಾಡಿದ್ರೆ ತಪ್ಪೇನಿಲ್ಲ, ಆದರೆ ಅದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Related Posts

Leave a Reply

Your email address will not be published.