HomeFresh Newsಮಂಗಳೂರು: ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು- ನಳಿನ್ ಕುಮಾರ್...

ಮಂಗಳೂರು: ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು- ನಳಿನ್ ಕುಮಾರ್ ಕಟೀಲ್‍ಗೆ ರೈಲ್ವೆ ಸಚಿವರ ಭರವಸೆ

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇವೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್‍ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ಒತ್ತಾಯಿಸಲಾಗಿದ್ದು ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲ ಎಂದವರು ಹೇಳಿದರು.ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments