ಮಂಗಳೂರು: ಕರಾವಳಿ ಭಾಗದಲ್ಲಿ ಬಂದ್‍ಗೆ ನೈತಿಕ ಬೆಂಬಲ, ಎಂದಿನಂತೆ ಜನಜೀವನ

ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.

ಕರ್ನಾಟಕ ಬಂದ್‍ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್‍ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು, ಶಾಲಾ-ಕಾಲೇಜು, ಆಟೋ, ಕ್ಯಾಬ್‍ಗಳು, ಎಲ್ಲಾ ಅಂಗಡಿಗಳು ಎಂದಿನಂತೆ ಕಾರ್ಯಾಚರಿಸುತ್ತಿದೆ.

ಕಾವೇರಿ ವಿಚಾರವಾಗಿ ನಮಗೆ ಸಹಾನುಭೂತಿಯಿದ್ದು ಆದರೆ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗಲಿದೆ ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‍ಗೆ ನೈತಿಕ ಬೆಂಬಲ ಸೂಚಿಸಿದ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ.

Related Posts

Leave a Reply

Your email address will not be published.