ಮಂಗಳೂರು: ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲು ವಿಳಂಬ ಧೋರಣೆ, ಬೀದಿ ಬದಿ ವ್ಯಾಪಾರಿಗಳಿಂದ ಮನಪಾ ಕಚೇರಿಗೆ ಮುತ್ತಿಗೆ

ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಮುತ್ತಿಗೆ ಹಾಕಲಾಯಿತು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಂದ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. 3 ವರ್ಷಗಳಿಂದ ನಮ್ಮ ಪ್ರಮಾಣ ಪತ್ರವಾಗಲೀ, ಗುರುತಿನ ಚೀಟಿಯನ್ನಾಗಲೀ ನವೀಕರಿಸಿ ನೀಡಿಲ್ಲ ಎಂದು ವ್ಯಾಪಾರಿಗಳು ಆರೋಪಿಸಿದರು.

ಬೀದಿ ಬದಿವ್ಯಾಪಾರಿಗಳ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮಾತನಾಡಿ, ಮಹಾ ನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳನ್ನು ಕಡೆಗಣಿಸಲು ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ನೇರ ಹೊಣೆ. ಅವರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಪ್ರಮಾಣ ಪತ್ರ, ಗುರುತಿನ ಚೀಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. 3 ಕೋ.ರೂ.ಲಂಚ ನೀಡಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ತಮ್ಮ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

Related Posts

Leave a Reply

Your email address will not be published.