ಮಂಗಳೂರು: ಅ.21ರಂದು ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದಿಂದ ಪಿಲಿಪರ್ಬ-2023

ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ತುಳು ನಾಡಿನ ಸಂಪ್ರದಾಯುಕ ಕಲೆ ಹುಲಿವೇಷ ಸ್ಪರ್ಧಾ ಕೂಡ ಕುಡ್ಲದ ಪಿಲಿಪರ್ಬ-2023 ಕಾರ್ಯಕ್ರಮ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಮತ್ತು ತನ್ನ ನೇತೃತ್ವದಲ್ಲಿ ಕಳೆದ ವರ್ಷ ಯಶಸ್ವಿಯಾಗಿ ಕುಡ್ಲದ ಪಿಲಿಪರ್ಬ ಆಯೋಜಿಸಿದ್ದು, ಅದರ ಮುಂದುವರಿದ ಭಾಗವಾಗಿ ದ್ವಿತೀಯ ವರ್ಷದ ಕುಡ್ಲದ ಪಿಲಿಪರ್ಬ ನಡೆಯಲಿದೆ ಎಂದು ತಿಳಿಸಿದರು.

ವಿಶಾಲ ವೇದಿಕೆಯಲ್ಲಿ ಪರಿಣಿತ ತೀರ್ಪುಗಾರರ ಸಮ್ಮುಖದಲ್ಲಿ ಕರಾವಳಿಯ ಜನಪ್ರಿಯ 15 ಹುಲಿ ವೇಷ ತಂಡಗಳು ಸ್ಪರ್ಧಾಕೂಟದಲ್ಲಿ ಪಾಲ್ಗೊಳ್ಳಲಿದ್ದು, ಇಡೀ ದಿನ ಕಡಲನಗರಿ ಹುಲಿಗಳ ಘರ್ಜನೆಗೆ ಸಾಕ್ಷಿಯಾಗಲಿದೆ. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮಕ್ಕಳಿಂದ ಹಿಡಿದು ಹಿರಿಯರ ತನಕ ಪ್ರತಿಯೊಬ್ಬ ಕಲಾಪ್ರೇಮಿಗೂ ಮುಕ್ತ ಅವಕಾಶವಿದ್ದು, ಸ್ಪರ್ಧಾ ಕೂಟದಲ್ಲಿ ಒಂದಕ್ಕಿಂತ ಒಂದು ವಿಭಿನ್ನತೆಯಿಂದ ಕೂಡಿರುವ ಹುಲಿವೇಷ ತಂಡಗಳಿಂದ ಇಡೀ ದಿನ ಸ್ಪರ್ಧಾಕೂಟ ಮನೋರಂಜನೆಯಲ್ಲಿ ಮಿಂದೇಳುವ ಅವಕಾಶವಿದೆ ಎಂದರು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪದಾಧಿಕಾರಿಗಳಾದ ಚೇತನ್ ಕಾಮತ್, ಜಗದೀಶ್ ಕದ್ರಿ, ಲಲಿತ್ ಮೆಂಡನ್, ಆಶ್ವಿತ್ ಕೊಟ್ಟಾರಿ,. ಕಿರಣ್ ಶೆಣೈ, ಸೂರಜ್ ಕಾಮತ್, ಬಿರುವೆರ್ ಕುಡ್ಲದ ಉದಯ ಪೂಜಾರಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.